ಸಾಮಾಜಿಕ ಕ್ರಾಂತಿಯ ಹರಿಕಾರ ಹಡಪದ ಅಪ್ಪಣ್ಣ ಜಯಂತಿ ಆಚರಣೆ.

ಸಾಮಾಜಿಕ ಕ್ರಾಂತಿಯ ಹರಿಕಾರ ಹಡಪದ ಅಪ್ಪಣ್ಣ ಜಯಂತಿ ಆಚರಣೆ.

ಬಬಲೇಶ್ವರ : ಹಡಪದ ಅಪ್ಪಣ್ಣನವರು ಹನ್ನೆರಡನೆ ಶತಮಾನದ ಒಬ್ಬ ಸಾಮಾಜಿಕ ಕ್ರಾಂತಿಯ ಹರಿಕಾರರು ಎಂದು ಶಿಕ್ಷಕ ಎಸ್ ಬಿ ಹಲಸಗಿ ಹೇಳಿದರು. ಬಬಲೇಶ್ವರ ಪಟ್ಟಣದ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಹಡಪದ ಅಪ್ಪಣ್ಣನವರು ಹನ್ನೆರಡನೆ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರೆಂದು ಹೆಸರು ಗಳಿಸಿದ್ದಾರೆಂದು ಹೇಳಿದರು.

ಬಸವಣ್ಣನವರ ಬಲಗೈ ಬಂಟನಾಗಿದ್ದ ಇವರು ಬಾಲ್ಯದಿಂದಲೂ ತುಂಬಾ ಒಡನಾಡಿಗಳಾಗಿದ್ದರು. ಇವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪ"ದಲ್ಲಿ ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದರು.

ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರೆಗೆ ಕೈಗನ್ನಡಿಯಾಗಿದೆ ಎಂದರೆ ತಪ್ಪಾಗಲಾರದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಿ.ಆರ್.ಧಬಡೆ, ಕಲಾವತಿ ಮಲಘಾಣ, ಶಂಕರ್ ತಳವಾರ, ಎನ್ ಎಲ್ ಇಂಗಳೆ ಇದ್ದರು. ಹರೀಶ್ ಬಬಲೇಶ್ವರ ಸ್ವಾಗತಿಸಿದರು ಅಶೋಕ ಬೂದಿಹಾಳ ಕಾರ್ಯಕ್ರಮ ನಿರೂಪಣೆ ಮಾಡಿದರು.