ಕಾಲುವೆ ಮೂಲಕ ರೈತರ ಜಮೀನಿಗೆ ನೀರು ಹರಿಸಲು ಐಸಿಸಿ ಸಭೆಯಲ್ಲಿ ನಿರ್ಧಾರ‌

ಕಾಲುವೆ ಮೂಲಕ ರೈತರ ಜಮೀನಿಗೆ ನೀರು ಹರಿಸಲು ಐಸಿಸಿ ಸಭೆಯಲ್ಲಿ ನಿರ್ಧಾರ‌

ವಿಜಯಪುರ : ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಿಂದ ರೈತರ ಜಮೀನಿಗೆ ನೀರು ಬಿಡುಗಡೆಗೆ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ನಡೆದ ಸಭೆ ಈ ನಿರ್ಧಾರ ಕೈಗೊಳ್ಳಲಾಗಿದೆ‌.

ಜುಲೈ 21 ರಿಂದ ನಾರಾಯಣಪೂರ ಎಡ, ಬಲದಂಡೆ ಕಾಲುವೆಗಳ ಮೂಲಕ ನೀರು ಬಿಡುಗಡೆಗೆ ನಿರ್ಧಾರ ಮಾಡಲಾಗಿದೆ. ಅದೇ ರೀತಿ ಜುಲೈ 27ರ ಬೆಳಿಗ್ಗೆ 6 ಗಂಟೆಯಿಂದ ಆಲಮಟ್ಟಿ ಎಡ, ಬಲದಂಡೆ ಕಾಲುವೆಗಳ ಮೂಲಕ ಆಲಮಟ್ಟಿ ಜಲಾಶಯದ ವ್ಯಾಪ್ತಿಯ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಆಗಷ್ಟ ಅಂತ್ಯದವರೆಗೆ ವಾರಬಂದಿ ಇಲ್ಲದೆ ಕಾಲುವೆಗಳಿಗೆ ನೀರು ಹರಿಸಲು ನಿರ್ಣಯಿಸಲಾಗಿದ್ದು, ಸಪ್ಟೆಂಬರ ತಿಂಗಳಲ್ಲಿ ಮತ್ತೆ ನೀರಾವರಿ ಸಲಹಾ ಸಮಿತಿ ಸಭೆ ಸೇರಿ ವಾರಬಂದಿ ಜಾರಿಗೆ ತರುವ ಬಗ್ಗೆ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಅಲ್ಲದೆ ಮುಳವಾಡ ಏತ ನೀರಾವರಿ ಯೋಜನೆಯ ಜಾಕ್ವೆಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದರ ಕಾಮಗಾರಿಯನ್ನು ಜುಲೈ 26ರೊಳಗೆ ದುರಸ್ಥಿ‌ ಕೆಲಸ ಮುಕ್ತಾಯ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

Advertisement

ADD