ತುಂಬಿದ ನದಿಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಬಲಿ

ತುಂಬಿದ ನದಿಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಬಲಿ
ತುಂಬಿದ ನದಿಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಬಲಿ

ಚಿಕ್ಕೊಡಿ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೃಷ್ಣಾ ನದಿ ಉಪನದಿಗಳಾದ ವೇದಗಂಗಾ ಮತ್ತು ದೂಧಗಂಗಾ ನದಿಗಳು ತುಂಬಿ ಹರಿಯುತ್ತಿದ್ದು ಮೀನು ಹಿಡಿಯಲು ಹೋದ ಬಾಲಕನೊರ್ವ ದೂಧಗಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ಸದಲಗಾ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತ ಬಾಲಕನನ್ನು ಚಿಕ್ಕೊಡಿ ತಾಲೂಕಿನ ಚಾಂದಶಿರದವಾಡ ಗ್ರಾಮದ ಸಂಗ್ರಾಮ ಪವಾರ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬಾಲಕ ಮೃತದೇಹವನ್ನು ಹೊರತೆಗೆಯುವಲ್ಲಿ ಯಶಸ್ವಿ ಆಗಿದ್ದಾರೆ. ಈ ಬಗ್ಗೆ ಸದಲಗಾ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.