ಐತಿಹಾಸಿಕ ಸ್ಮಾರಕಗಳ ರಕ್ಷಣೆಗೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಐತಿಹಾಸಿಕ ಸ್ಮಾರಕಗಳ ರಕ್ಷಣೆಗೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ : ಐತಿಹಾಸಿಕ ನಗರ ವಿಜಯಪುರದಲ್ಲಿರು ಸ್ಮಾರಕಗಳ ರಕ್ಷಣೆಗೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದ್ದಾರೆ. ಸ್ಮಾರಕಗಳ ರಕ್ಷಣೆಗಾಗಿ ಕೇಂದ್ರ ಸಂಸ್ಕೃತಿ ಹಾಗೂ ಪುರಾತತ್ವ ಪ್ರವಾಸೋಧ್ಯಮ ಸಚಿವ ಪ್ರಲ್ಹಾದ್ ಸಿಂಗ್ ಪಟೇಲ್ ಅವರನ್ನು ಭೇಟಿ ಮಾಡಿ, ವಿಜಯಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳ ಸಮಸ್ಯೆ ಬಗ್ಗೆ ಚರ್ಚೆ ನಡೆಸಿದರು.

ಈ ಹಿಂದೆ  ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಸಚಿವರಾಗಿದ್ದ ಸಂದರ್ಭದಲ್ಲಿ ಪ್ರಲ್ಹಾದ್ ಸಿಂಗ್ ಪಟೇಲ್ ಕೂಡಾ ಸಂಪುಟದಲ್ಲಿದ್ದರು. ಇವರಿಬ್ಬರ ಆತ್ಮೀಯತೆ ಅಭಿವೃದ್ಧಿಗೆ ಸಹಾಯಕವಾಗಲಿದೆ. ಕೇಂದ್ರ ಸಚಿವರು ಶಾಸಕ ಯತ್ನಾಳ್ ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಶೀಘ್ರ ಸಮಸ್ಯೆಗಳನ್ನ ಪರಿಹರಿಸುವುದಾಗಿ ಭರವಸೆ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಗೆ ಪ್ರವಾಸೋದ್ಯಮ ವರದಾನವಾಗಲಿದೆ.