ಮೂಲಭೂತ ಸೌಕರ್ಯಕ್ಕಾಗಿ ಗ್ರಾಮಸ್ಥರ ಪ್ರತಿಭಟನೆ

ಮೂಲಭೂತ ಸೌಕರ್ಯಕ್ಕಾಗಿ ಗ್ರಾಮಸ್ಥರ ಪ್ರತಿಭಟನೆ

ವಿಜಯಪುರ : ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ವಿಜಯಪುರ ಜಿಲ್ಲೆ ಆಲಮೇಲ್ ಪಟ್ಟಣ ಪಂಚಾಯ್ತಿಗೆ ಸಾರ್ವಜನಿಕರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಆಲಮೇಲ ಪಟ್ಟಣದ ವಾರ್ಡ್ ನಂ 2ರ ನಿವಾಸಿಗಳು ಪಟ್ಟಣ ಪಂಚಾಯತಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ವಾರ್ಡ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ವ್ಯವಸ್ಥೆ ಹದಗೆಟ್ಟಿದ್ದು ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಕೇರ್ ಮಾಡುತ್ತಿಲ್ಲವೆಂದು ಆರೋಪಿಸಿ, ಪಟ್ಟಣ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದರು.