ವೃಕ್ಷ ಅಭಿಯಾನ ಪ್ರತಿಷ್ಠಾನದಿಂದ ಶಾಲಾ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ

ವೃಕ್ಷ ಅಭಿಯಾನ ಪ್ರತಿಷ್ಠಾನದಿಂದ ಶಾಲಾ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ

ವಿಜಯಪುರ : ನಗರದಲ್ಲಿ ಆಗಷ್ಟ 4ರಂದು ಹಮ್ಮಿಕೊಂಡಿರುವ ಮ್ಯಾರಥಾನ್ ಅಂಗವಾಗಿ ಜಿಲ್ಲಾಡಳಿತ ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನ ಸಹಯೋಗದಲ್ಲಿ ಇಂದು ಶಾಲಾ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ನಗರದ ಗಗನಮಹಲ್‍ನಲ್ಲಿ ಆಯೋಜಿಸಲಾಗಿತ್ತು.

ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯಲ್ಲಿ ಅರಣ್ಯ ಪ್ರದೇಶವನ್ನು ಹೆಚ್ಚಿಸುವ ಉದ್ದೇಶ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪರಿಸರ ಸಂರಕ್ಷಣೆ, ಜಾಗೃತಿ ಕುರಿತ ಚಿತ್ರಗಳನ್ನು ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಚಿತ್ರಕಲೆಯನ್ನು ಬಿಡಿಸುವ ಮೂಲಕ ಸ್ಪರ್ಧೆ ಉದ್ಘಾಟಿಸಿದರು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣ್ಣಶೆಟ್ಟಿ, ರಾಜ್ಯ ಪ್ರಶಸ್ತಿ ವಿಜೇತ ಚಿತ್ರಕಲಾ ಶಿಕ್ಷಕ ಎಂ.ಕೆ.ಪತ್ತಾರ, ಸಿದ್ದೇಶ್ವರ ಚಿತ್ರಕಲಾಮಂದಿರ ಪ್ರಾಚಾರ್ಯ ವಿ.ವಿ.ಹಿರೇಮಠ, ಪ್ರಾಚ್ಯವಸ್ತು ಇಲಾಖೆ ಮೌನೇಶ ಕುರವತ್ತಿ, ಶರದ್ ರೂಢಗಿ ಎಂ.ಕೆ.ಪಾಟೀಲ್, ಎಂ.ಕೆ.ಮಾನೆ, ಪಿ.ಎಸ್.ಕಡೆಮನಿ ಮತ್ತಿತರರು ಉಪಸ್ಥಿತರಿದ್ದರು.

ನಗರದ 35 ಶಾಲೆಯಿಂದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಆಗಷ್ಟ4ರಂದು ನಡೆಯುವ ಮ್ಯಾರಥಾನ್ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು ಹಾಗೂ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಭಾವಚಿತ್ರವನ್ನು ಬ್ಯಾನರ್‍ನಲ್ಲಿ ಅಳವಡಿಸಲಾಗುವದು. ಬಹುಮಾನಗಳ ಒಟ್ಟು ಮೊತ್ತ 20ಸಾವಿರ ಆಗಿದೆ ಎಂದು ವೃಕ್ಷ ಅಭಿಯಾನ ಪ್ರತಿಷ್ಠಾನ ಸಂಚಾಲಕ ಡಾ.ಮುರುಗೇಶ ಪಟ್ಟಣಶೆಟ್ಟಿ ತಿಳಿಸಿದ್ದಾರೆ.